BREAKING : ಮೈಸೂರಿನಲ್ಲಿ ‘ಅದ್ದೂರಿ ದಸರಾ’ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರು ಪೊಲೀಸ್ ವಶಕ್ಕೆ

ಮೈಸೂರು : ‘ ಅದ್ದೂರಿ  ಮೈಸೂರು ದಸರಾ’ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ.

ಮೈಸೂರು ದಸರಾ ಸಂಭ್ರಮಾಚರಣೆ ವೇಳೆ ಅಡ್ಡಪಡಿಸಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಂಬೂ ಸವಾರಿ ವೀಕ್ಷಣೆಗೆ ಹಾಕಿದ್ದ ಗ್ಯಾಲರಿಯಲ್ಲಿ ಕುಳಿತಿದ್ದ ರೈತರನ್ನು ಬಂಧಿಸಿದ ಪೊಲೀಸರು ಜೀಪ್ನಲ್ಲಿ ಕರೆದೊಯ್ದಿದ್ದಾರೆ. ರೈತ ಮುಖಂಡ ಭಾಗ್ಯರಾಜ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನಡೆಯುತ್ತಿದ್ದು, ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಿವೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 216ರಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಕೊಡಲಾಗುತ್ತಿಲ್ಲ. ಈ ಎಲ್ಲದರ ಮಧ್ಯೆ ಅದ್ಧೂರಿ ದಸರಾ ಸಂಭ್ರಮ ಬೇಕಾ..? ಎಂದು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೆ ಕುರುಬೂರ್ ಶಾಂತಕುಮಾರ್ ಹಾಗೂ ರೈತರು ಮುಂದಾದರು. ಆಗ ಪೊಲೀಸರು ಕಬ್ಬು ಬೆಳೆಗಾರರನ್ನು ಬಂಧಿಸಿದರು.

ಸಂಗ್ರಹ ಚಿತ್ರ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read