ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು ಗ್ರಾಮದಲ್ಲಿ ಆಟೋ ಚಾಲಕ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ಆಟೋ ಚಾಲಕ ಅಂಕುಶ್ ಹುಚ್ಚೇನೂರು(28), ಮಗ ಸಾಯಿರಾಜ್ (5) ಹಾಗೂ ಪುತ್ರಿ ತನು (6) ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಹುಮ್ನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.