ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೋಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಗ ಶರತ್ ಎಂಬಾತ್ ತನ್ನ ತಂದೆ ಭಾಸ್ಕರ್ ಹಾಗೂ ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಹಿಂದೆಯೂ ಶರತ್ ತನ್ನ ತಂದೆ, ತಾಯಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ. ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.