alex Certify BREAKING : ಫೆ. 2 ರಿಂದ ಮೂರು ದಿನ ವಿಶ್ವ ವಿಖ್ಯಾತ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಫೆ. 2 ರಿಂದ ಮೂರು ದಿನ ವಿಶ್ವ ವಿಖ್ಯಾತ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಫೆ. 2 ರಿಂದ ವಿಶ್ವ ವಿಖ್ಯಾತ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಬರಗಾಲದ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಿದ್ದ ಸರ್ಕಾರ ಇದೀಗ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಸಮ್ಮತಿ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ನಿರ್ದೇಶನ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...