ಫೆಂಗಲ್ ಚಂಡಮಾರುತದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಒದಗಿಸಲು ಸಹಾಯ ಮಾಡಲು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎಸ್ಡಿಆರ್ಎಫ್) ಕೇಂದ್ರ ಪಾಲು ಎರಡು ಕಂತುಗಳಾಗಿ 944.8 ಕೋಟಿ ರೂ.ಗಳನ್ನು ತಮಿಳುನಾಡು ಸರ್ಕಾರಕ್ಕೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಗೃಹ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಐಎಂಸಿಟಿಗಳ ಮೌಲ್ಯಮಾಪನ ವರದಿಗಳನ್ನು ಸ್ವೀಕರಿಸಿದ ನಂತರ, ಸ್ಥಾಪಿತ ಕಾರ್ಯವಿಧಾನದ ಪ್ರಕಾರ ವಿಪತ್ತು ಪೀಡಿತ ರಾಜ್ಯಗಳಿಗೆ ಎನ್ಡಿಆರ್ಎಫ್ನಿಂದ ಹೆಚ್ಚುವರಿ ಆರ್ಥಿಕ ಸಹಾಯವನ್ನು ಅನುಮೋದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಈ ವರ್ಷ ಕೇಂದ್ರ ಸರ್ಕಾರವು ಈಗಾಗಲೇ 28 ರಾಜ್ಯಗಳಿಗೆ 21,718.716 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಸ್ಡಿಆರ್ಎಫ್ನಿಂದ 26 ರಾಜ್ಯಗಳಿಗೆ 14,878.40 ಕೋಟಿ ರೂ., ಎನ್ಡಿಆರ್ಎಫ್ನಿಂದ 18 ರಾಜ್ಯಗಳಿಗೆ 4,808.32 ಕೋಟಿ ರೂ., 11 ರಾಜ್ಯಗಳಿಗೆ ರಾಜ್ಯ ವಿಪತ್ತು ತಗ್ಗಿಸುವ ನಿಧಿಯಿಂದ (ಎಸ್ಡಿಎಂಎಫ್) 1,385.45 ಕೋಟಿ ರೂ., ಏಳು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ತಗ್ಗಿಸುವ ನಿಧಿಯಿಂದ (ಎನ್ಡಿಎಂಎಫ್) 646.546 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.