ಕೊಡಗು : ಫೆಂಗಲ್ ಚಂಡಮಾರುತದ ಪರಿಣಾಮ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಕೊಡಗು ನಾಳೆ ಬೆಳಿಗ್ಗೆ 8.30 ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ಹೊರತು ಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ:03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು ಘೋಷಿಸಿದೆ.