ಫೆಂಗಲ್ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಎಲ್ಲೆಲ್ಲಿ ರಜೆ..?
ಕೊಡಗು
ಫೆಂಗಲ್ ಚಂಡಮಾರುತದ ಪರಿಣಾಮ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಕೊಡಗು ನಾಳೆ ಬೆಳಿಗ್ಗೆ 8.30 ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ಹೊರತು ಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ
ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಸೋಮವಾರ ಹೊರಡಿಸಿದ ಫೆಂಗಲ್ ಚಂಡಮಾರುತದಿಂದಾಗಿ ಭಾರಿ ಮಳೆ ಮುನ್ಸೂಚನೆ ಮತ್ತು ಆರೆಂಜ್ ಅಲರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಡಿಸೆಂಬರ್ 3 ರ ಮಂಗಳವಾರ ಮುಚ್ಚಲ್ಪಡುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ:03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು ಘೋಷಿಸಿದೆ.
ಕಾಸರಗೋಡು
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾಸರಗೋಡಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ( ಡಿ.3) ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಡಿ.ಸಿ ಕೆ ಇಂಬುಶೇಖರ್ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿಯೂ ಅತಿಯಾದ ಚಳಿ, ಶೀತಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಬೆಚ್ಚಗಿನ ಉಡುಪುಗಳನ್ನು ಧರಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅವಶ್ಯವಿದ್ದರಷ್ಟೇ ಮನೆಯಿಂದ ಹೊರ ಹೋಗಬೇಕು ಎಂದು ಸೂಚನೆ ನೀಡಲಾಗಿದೆ