ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.
ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಭ್ರೂಣ ಹತ್ಯೆ ಪ್ರಕರಣ ಬಯಲಾಗುತ್ತಿದ್ದಂತೆ ಈಕೆ ಕೆಲಸ ಬಿಟ್ಟಿದ್ದಳು, ತನಿಖೆ ನಡೆಸಿದ ಪೊಲೀಸರು ಮಂಜುಳಾರನ್ನು ಲಾಕ್ ಮಾಡಿದ್ದಾರೆ.
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಮಾಡಿದ್ದು, ಇಬ್ಬರು ವೈದ್ಯರು ಸೇರಿ 9 ಮಂದಿಯನ್ನು ಬಂಧಿಸಿದ್ದರು. ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಇಲಾಖಾ ತನಿಖೆಯನ್ನು ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದಲ್ಲದೇ ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದ್ದು, ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.