
ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಸಿದ್ದರು.
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸೌಗಂಧಿಕಾ ರಘುನಾಥ್ ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಹೇಳಿದ್ದರು.ಇದಕ್ಕೆ ಪ್ರತಿಯಾಗಿ ಚಕ್ರವರ್ತಿ ಸೂಲಿಬೆಲೆ ನಿನಗೆ ಎಲ್ಲಿ ಯಾಕೆ ಉರಿ ಬಂತೊ ಗೊತ್ತಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಕಮೆಂಟ್ ಹಾಕಿದ್ದರು.