ಬೆಂಗಳೂರು : ರಾಹುಲ್ ಗಾಂಧಿಯನ್ನು ‘ಉಗ್ರ’ ಎಂದಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೆಪಿಸಿಸಿ ಲೀಗಲ್ ಸೆಲ್ ನಿಂದ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ದೇಶದ ನಂಬರ್ ಒನ್ ಭಯೋತ್ಪಾದಕ’ ಎಂದು ಕರೆದಿದ್ದರು. ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಕಾಂಗ್ರೆಸ್ ನಾಯಕರು ಬುಧವಾರ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಖಂಡನೆ
ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ರವನೀತ್ ಬಿಟ್ಟು ಅವರು ರಾಹುಲ್ ಗಾಂಧಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಇದು ಸಾರ್ವಜನಿಕವಾಗಿ ರಾಹುಲ್ ಗಾಂಧಿಯವರ ವಿರುದ್ಧ ಜನರನ್ನು ಎತ್ತಿಕಟ್ಟಿ ಹತ್ಯೆ-ಹಲ್ಲೆಗೆ ಪ್ರಚೋದನೆ ನೀಡುವ ಪ್ರಯತ್ನ ಎನ್ನುವುದು ನಿಸ್ಸಂಶಯ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದರು.