ಬೆಂಗಳೂರು : ಬೆಂಗಳೂರಿನ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿದೆ.
ಮಹದೇವಪುರ ಬಿ ನಾರಾಯಣಪುರದ ಟ್ರಯಂಫ್ ಬೈಕ್ ಶೋರೋಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ 50 ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ.