alex Certify BREAKING : ಹಾವೇರಿಯ ಪಟಾಕಿ ಗೋದಾಮಿಯಲ್ಲಿ ಅಗ್ನಿ ದುರಂತ : ನಾಲ್ವರ ವಿರುದ್ಧ `FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯ ಪಟಾಕಿ ಗೋದಾಮಿಯಲ್ಲಿ ಅಗ್ನಿ ದುರಂತ : ನಾಲ್ವರ ವಿರುದ್ಧ `FIR’ ದಾಖಲು

ಹಾವೇರಿ : ಹಾವೇರಿಯ ಸಾತೇನಹಳ್ಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಾವೇರಿಯ ಆಲದಕಟ್ಟಿಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ನಾಲ್ವರ ಮೇಲೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ. ಬಿ ಜಯಣ್ಣ, ಸಿ.ಜಿ ವೀರೇಶ, ವಿಜಯ ಯರೇಸೀಮಿ, ಕುಮಾರಪ್ಪ ಸಾತೇನಹಳ್ಳಿ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ.

ಅಗ್ನಿ ಅವಘಡದಲ್ಲಿ ದ್ಯಾಮಪ್ಪ, ರಮೇಶ, ಶಿವಲಿಂಗಪ್ಪ , ಕೆ.ಬಿ ಜಯಣ್ಣ ನಾಲ್ವರು ಸಜೀವ ದಹನಗೊಂಡಿದ್ದು, ವಾಸೀಂ ಹಾಗೂ ಶೇರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನ ಪಕ್ಕದಲ್ಲಿಯೇ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ಇದರ ಕಿಡಿಯೊಂದು ಪಟಾಕಿ ಗೋದಾಮಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...