alex Certify BREAKING : ವಿಜಯಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ; ಮೂವರು ವಿದ್ಯಾರ್ಥಿಗಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ; ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.

ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಘಟನೆಯಲ್ಲಿ ಸಾಗರ್, ಸಮರ್ಥ್. ಮಲ್ಲಿಕಾರ್ಜುನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಸತಿ ಶಾಲೆ ಉದ್ಘಾಟನೆಯಾಗಿ 6 ತಿಂಗಳಲ್ಲಿ ಈ ಅವಘಡ ನಡೆದಿದೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...