ಬೆಂಗಳೂರು : ಬೆಂಗಳೂರಿನ ಹೊಂಡಾ ಶೋ ರೋಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೋಂಡಾ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,ಶೋ ರೂಂ ಹೊತ್ತಿ ಉರಿಯುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.