alex Certify BREAKING : ರಾಜ್ಯದ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ಖಾಸಗಿ ಅನುದಾನಿತ/ ಅನುದನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

2024-25ನೇ ಸಾಲಿಗೆ ಖಾಸಗಿ ಶಾಲೆಗಳ ಪಥಮ ಮಾನ್ಯತ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಉಲ್ಲೇಖ(6)ರ ಸುತ್ತೋಲೆ ನೀಡಲಾಗಿತ್ತು ಉಲ್ಲೇಖ(8)ರಂತೆ ಶಾಲಾ ಆಡಳಿತ ಮಂಡಳಿಗಳಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 05-10- 2024 ರಿಂದ 04-11-2024ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು, ಆದಾಗ್ಯೂ ಕೆಲವು ಶಾಲೆಗಳು 2024-25ನೇ ಸಾಲಿನಲ್ಲಿ ನೀಡಿದ ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿದ್ದು ಹಲವಾರು ಶಾಲಾ ಆಡಳಿತ ಮಂಡಳಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರಿಂದ ಅಂತಹ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೋರಿ ಮನವಿಗಳು ಸಲ್ಲಿಕೆಯಾಗಿರುತ್ತವೆ.

ಈ ಹಿನ್ನೆಲೆಯಲ್ಲಿ ಅಂತಹ ಶಾಲೆಗಳಿಗೆ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯಲು ಖಾಸಗಿ ಅನುದಾನಿತ/ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಮಾನ್ಯತ ನವೀಕರಣ ಮಾಡಿಕೊಳ್ಳುವ ಮತ್ತು ಆ ರೀತಿ ಮಾನ್ಯತೆ ನವೀಕರಣ ಮಾಡಿಕೊಳ್ಳಲು ವಿಫಲರಾಗುವ ಶಾಲೆಗಳ ನೊಂದಣಿಯನ್ನು ನಿಯಮಾನುಸಾರ ರದ್ದು ಪಡಿಸುವ ಮತ್ತು ಮಾನ್ಯತೆಯನ್ನು ಹಿಂಪಡೆಯುವ ಷರತ್ತಿಗೊಳಪಡಿಸಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೊನೆಯ ಬಾರಿಗೆ ಮಾತ್ರ 2024-25ನೇ ಸಾಲಿನ ಮಾನ್ಯತೆ ನವೀಕರಣಕ್ಕೆ ಮಾತ್ರ ಅವಕಾಶ ನೀಡಲು ಸರ್ಕಾರವು ಅನುಮತಿ ನೀಡಿರುತ್ತಾರೆ.

ಉಲ್ಲೇಖಿತ ಕಾಯ್ಕ ಮತ್ತು ನಿಯಮಗಳನುಸಾರ ಶಾಲೆಗಳನ್ನು ಅಧಿಕೃತ ಎಂದು ಪರಿಗಣಿಸಲು ಶಾಲೆಗಳು ಆಯಾ ಅವಧಿಯಲ್ಲಿ ಮಾನ್ಯತೆಯನ್ನು ನವೀಕರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಮಾನ್ಯತೆ ನವೀಕರಿಸದಿದ್ದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೊಂದಾಯಿಸಲು, ಆರ್.ಟಿ.ಇ. ಶುಲ್ಕ, ಮರುಪಾವತಿಗೆ ಪ್ರಸ್ತಾವನೆ ಪರಿಗಣಿಸಲು, ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಅವಕಾಶವಿರುವುದಿಲ್ಲ.
ಉಪನಿರ್ದೇಶಕರು(ಆಡಳಿತ) ಇವರು ವೈಯುಕ್ತಿಕ ಗಮನ ಹರಿಸಿ ತಮ್ಮ ವ್ಯಾಪ್ತಿಯಲ್ಲಿ ಈವರೆವಿಗೂ 2024- 25ನೇ ಸಾಲಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯದಿರುವ ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ಮಾಹಿತಿ ವೀಡಿ ಎಲ್ಲಾ ಆಗತ್ಯ ದಾಖಲೆ/ಮಾಹಿತಿಗಳೊಂದಿಗೆ ಆನ್ಲೈನ್ ಮೂಲಕ ಪೂರ್ಣ ಪ್ರಸ್ತಾವನೆ ಸಲ್ಲಿಸಲು ಮಾನ್ಯತೆ ಪಡೆಯಲು ಸೂಚನೆ ನೀಡಲು ತಿಳಿಸಿದೆ.

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...