![](https://kannadadunia.com/wp-content/uploads/2023/03/coronavirus-2.tmb-479v.jpg)
ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಮೈಸೂರಿನಲ್ಲಿ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರಿನ 56 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು, ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಗೆ ಹೃದಯಸಂಬಂಧಿ ಸಮಸ್ಯೆ ಜೊತೆಗೆ ಅಧಿಕರಕ್ತದೊತ್ತಡದ ಸಮಸ್ಯೆಯೂ ಇತ್ತು ಎನ್ನಲಾಗಿದೆ.