ಬಾಗ್ಪತ್: ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇದಿಕೆ ಕುಸಿದು ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಬರೌತ್ ನ ಜೈನ ನಿರ್ವಾಣ ಉತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡುಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ.
ಪರಿಸ್ಥಿತಿಯನ್ನು ನಿಭಾಯಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಭಾರಿ ಪೊಲೀಸ್ ನಿಯೋಜನೆಯೊಂದಿಗೆ ಸ್ಥಳಕ್ಕೆ ಧಾವಿಸಿದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH | Baghpat, Uttar Pradesh: DM Baghpat Asmita Lal says, “There was a Jain community program in Baraut. A wooden structure collapsed here, injuring about 40 people. 20 people were sent home after treatment, 20 people are still undergoing treatment. 5 people have died…” https://t.co/2Gix8vk7AH pic.twitter.com/7XDaYzIAig
— ANI UP/Uttarakhand (@ANINewsUP) January 28, 2025