ಚೆನ್ನೈ : ತಮಿಳುನಾಡಿನ ಪುದುಕೊಟ್ಟೈನಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಪುದುಕೊಟ್ಟೈ ಜಿಲ್ಲೆಯ ಬಳಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು 16 ಜನರು ಗಾಯಗೊಂಡಿದ್ದಾರೆ ಎಂದು ಪುದುಕೊಟ್ಟೈ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ತಿರುಚ್ಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ಟ್ರಕ್ ನಿಯಂತ್ರಣ ಕಳೆದುಕೊಂಡು ಚಹಾ ಅಂಗಡಿಗೆ ನುಗ್ಗಿದೆ. ಗಾಯಗೊಂಡವರನ್ನು ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.