alex Certify BREAKING : ಅಮೆರಿಕದ ಬಾರ್ ನಲ್ಲಿ ಅಪರಿಚಿತನಿಂದ ಗುಂಡಿನ ದಾಳಿ : ಐವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಮೆರಿಕದ ಬಾರ್ ನಲ್ಲಿ ಅಪರಿಚಿತನಿಂದ ಗುಂಡಿನ ದಾಳಿ : ಐವರು ಸ್ಥಳದಲ್ಲೇ ಸಾವು

ಕ್ಯಾಲಿಪೋರ್ನಿಯಾ : ಅಮೆರಿಕದ ಕ್ಯಾಲಿಪೋರ್ನಿಯಾದ ಬಾರ್ ನಲ್ಲಿ ಅಪರಿಚಿತನೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ಯಾಲಿಫೋರ್ನಿಯಾದ ಆರೆಂಜ್ ಕೌಂಟಿಯ ಬಾರ್‌ ವೊಂದರಲ್ಲಿ ಮುಸುಕುದಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಬಂದೂಕುಧಾರಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಟ್ರಾಬುಕೊ ಕ್ಯಾನ್ಯನ್‌ನಲ್ಲಿರುವ ಕುಕ್ಸ್ ಬಾರ್‌ನಲ್ಲಿ ಅಪರಿಚಿತನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಗಾಯಗೊಂಡ ಆರು ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಆರೆಂಜ್ ಕೌಂಟಿ ಶೆರಿಫ್ ಎಕ್ಸ್‌(ಟ್ವಿಟರ್)ನಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...