ಕಠ್ಮಂಡು: 76 ಪ್ರಯಾಣಿಕರನ್ನು ಹೊತ್ತ ಬುದ್ಧ ಏರ್ ವಿಮಾನದ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಹೌದು. ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಸೇರಿದಂತೆ 76 ಪ್ರಯಾಣಿಕರನ್ನು ಹೊತ್ತ ಬುದ್ಧ ಏರ್ ವಿಮಾನದ ಎಡ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನವು ವಿಒಆರ್ ಲ್ಯಾಂಡಿಂಗ್ ಮಾಡಿ ಸುರಕ್ಷಿತವಾಗಿ ವಿಮಾನ ನಿಲ್ದಾಣಕ್ಕೆ ಮರಳಿತು. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.