ಬೆಂಗಳೂರು : ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಇಂದು ಬೆಂಗಳೂರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸರ್ಕಾರವು ಕೆಜಿಗೆ 29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಕೇಂದ್ರದ 5 ಕೆಜಿ ಅಕ್ಕಿ ಹೊರತುಪಡಿಸಿ 1 ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.