ಮೈಸೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ , ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ ಎಂದು ಮೂಲಗಳು ಮಾಹಿತಿ ನೀಡಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರಾಗಿದ್ದ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೂಡ ಕರ್ತವ್ಯ ನಿರ್ವಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ವೇಳೆ ಕಾಪು ಸಿದ್ದಲಿಂಗಸ್ವಾಮಿ ಅವರ ವಿರುದ್ದ ಅಖಾಡಕ್ಕಿಳಿದಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.