ಬೆಂಗಳೂರು : ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.
ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಬಿ,ಎಸ್ ಯಡಿಯೂರಪ್ಪ ಮತ್ತು ಇತರೆ ಆರೋಪಿಗಳಿಗೆ ಸಮನ್ಸ್ ನೀಡಿದೆ. ಕೋರ್ಟ್ ಗೆ ಸಲ್ಲಿಸಿದ್ದ ಆರೋಪಪಟ್ಟಿ ವಿಚಾರಣೆಗೆ ಕೋರ್ಟ್ ಪರಿಗಣಿಸಿದೆ ಹಾಗೂ ಬಿಎಸ್ವೈ ಸೇರಿದಂತೆ ಹಲವರಿಗೆ ಸಮನ್ಸ್ ನೀಡಿದೆ.
ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.