ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಅವರು ಬುಧವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ತೀವ್ರ ಜ್ವರದ ಹಿನ್ನೆಲೆ ಕುಮಾರಸ್ವಾಮಿ ಅವರನ್ನು ಐಸಿಯೂ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಂದು ವಾರ್ಡ್ ಗೆ ಶಿಫ್ಟ್ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಇಂದು ಸಂಜೆ ವೇಳೆಗೆ ವಾರ್ಡ್ ಗೆ ಶಿಫ್ಟ್ ಮಾಡಲಾಗುವುದಾಗಿ ವೈದ್ಯರು ತಿಳಿಸಿದ್ದಾರೆ.