![](https://kannadadunia.com/wp-content/uploads/2023/04/Jagadish-Shettar-DH.jpg)
ನವದೆಹಲಿ : ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾಗಿದ್ದು, ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ ಜಗದೀಶ್ ಶೆಟ್ಟರ್ ಜೊತೆಗೆ ಮಹತ್ವದ ಸಭೆ ನಡೆಸಿರುವ ಅಮಿತ್ ಶಾ ಬಿಜೆಪಿ ಮರು ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಬಳಿಕ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಅಮಿತ್ ಶಾ ಜೊತೆಗೆ ಮಾತುಕತೆಯಲ್ಲಿ ಬಿಜೆಪಿ ಸೇರಲು ಜಗದೀಶ್ ಶೆಟ್ಟರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಹೈಕಮಾಂಡ್ ನಿರ್ಧರಿಸಿತ್ತು.