ಬೆಂಗಳೂರು : ಕಾಂಗ್ರೆಸ್ ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುಡ್ ಬೈ ಹೇಳಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು ದೆಹಲಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಮಿತ್ ಶಾ ಅವರನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಮರು ಸೇರ್ಪಡೆಗೆ ಜಗದೀಶ್ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
ಬಿಜೆಪಿಯ ಹಿರಿಯ ನಾಯಕರು ಜಗದೀಶ್ ಶೆಟ್ಟರ್ ಗೆ ಪಕ್ಷದ ಶಾಲು ಹೊದಿಸಿ ಹೂಗುಚ್ಚ ನೀಡಿ ಬಿಜೆಪಿ ಪಕ್ಷಕ್ಕೆ ಸ್ವಾಗತ ಕೋರಿದರು. ನಂತರ ಮಾತನಾಡಿದ ಶೆಟ್ಟರ್ ‘ ನಾನು ಮತ್ತೆ ಬಿಜೆಪಿಗೆ ಬರಬೇಕೆಂದು ಬಿಜೆಪಿ ನಾಯಕರ ಅಪೇಕ್ಷೆಯಾಗಿತ್ತು, ಅಂತೆಯೇ ಬಂದಿದ್ದೇನೆ. ಇದರಿಂದ ಬಹಳ ಸಂತೋಷವಾಗುತ್ತಿದೆ ಎಂದರು.