ಬೆಂಗಳೂರು : ಮಾಜಿ ಸಿಎಂ ಎಸ್ .ಎಂ ಕೃಷ್ಣ ವಿಧಿವಶರಾದ ಹಿನ್ನೆಲೆ ಇಂದಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಔತಣಕೂಟ ಮುಂದೂಡಿಕೆಯಾಗಿದೆ.
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ಇಂದು ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ, ಔತಣಕೂಟ ಮುಂದೂಡಿಕೆಯಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.