ಮಂಡ್ಯ : ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನರಾದ ಹಿನ್ನೆಲೆ ನಾಳೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಪ್ರಗತಿಪರ ಸಂಘಟನೆ (ಡಿ.11) ರಂದು ನಾಳೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಬಂದ್ ಗೆ ಕರೆ ನೀಡಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನೆರವೇರಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.