ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರನ್ನು ಅನಾರೋಗ್ಯದ ಹಿನ್ನೆಲೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಸೇನೆ ನಾಯಕ (ಯುಬಿಟಿ) ಉದ್ಧವ್ ಠಾಕ್ರೆ 2016 ರಲ್ಲಿ ಆಂಜಿಯೋಗ್ರಫಿಗೆ ಒಳಗಾದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಇದೀಗ ಮತ್ತೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಉದ್ಧವ್ ಆಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸುತ್ತವೆ.