ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಯನ್ನು ರಾಂಚಿಯ ವಿಶೇಷ ಪಿಎಂಎಲ್ಎ ನ್ಯಾಯಾಲಯ ಬುಧವಾರ (ಫೆಬ್ರವರಿ 7) ಐದು ದಿನಗಳವರೆಗೆ ವಿಸ್ತರಿಸಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕನನ್ನು ಫೆಬ್ರವರಿ 2 ರಂದು ವಿಶೇಷ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಪ್ರಕರಣದಿಂದ ಐದು ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಲಾಗಿದೆ.
ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಗಂಟೆಗಳಿಗೂ ಹೆಚ್ಚು ವಿಚಾರಣೆಯ ನಂತರ ಜನವರಿ 31 ರ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಲ್ಪ ಹೊತ್ತಲ್ಲೇ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದೆ.
ಜಾರಿ ನಿರ್ದೇಶನಾಲಯದ ಕ್ರಮದ ವಿರುದ್ಧ ಬಂಧನಕ್ಕೊಳಗಾದ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಫೆಬ್ರವರಿ 12 ರಂದು ವಿಚಾರಣೆ ನಡೆಸಲಿದೆ ಎಂದು ಅವರ ವಕೀಲ ಅಡ್ವೊಕೇಟ್ ಜನರಲ್ ರಾಜೀವ್ ರಂಜನ್ ತಿಳಿಸಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೊರೆನ್ ಅವರನ್ನು ಕಳೆದ ವಾರ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಸೊರೆನ್ ಅವರ ಅರ್ಜಿಗೆ ಉತ್ತರವನ್ನು ಸಲ್ಲಿಸುವಂತೆ ಹೈಕೋರ್ಟ್ ಇಡಿಗೆ ಸೂಚಿಸಿದೆ. ಇದಕ್ಕೂ ಮುನ್ನ ಫೆಬ್ರವರಿ 2 ರಂದು, ಜೆಎಂಎಂ ನಾಯಕನನ್ನು ರಾಂಚಿಯ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು.