ನವದೆಹಲಿ : ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ನಂತರ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.ಇಡಿಯು ಜನವರಿ 31ರಂದು ಹೇಮಂತ್ ಸೊರೆನ್ ಅವರನ್ನು ಬಂಧಿಸಿತ್ತು. . ಏಪ್ರಿಲ್ 15ರಂದು ಜೆಎಂಎಂ ನಾಯಕ ಅಂತು ಟಿರ್ಕಿ, ಭೂ ಉದ್ಯಮಿ ಬಿಪಿನ್ ಸಿಂಗ್, ಪ್ರಿಯರಂಜನ್ ಸಹಾಯ್, ಮೊಹಮ್ಮದ್ ಇರ್ಷಾದ್ ಅವರನ್ನು ಬಂಧಿಸಿತ್ತು. .ಭೂ ಹಗರಣದ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿ ಸೋರೆನ್ ಇದ್ದರು. ಇದೀಗ ಅವರಿಗೆ ಕೋರ್ಟ್ ಜಾಮೀನು ನೀಡಿದೆ.