ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರನ್ನು 5 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ.
ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಹೇಮಂತ್ ಸೊರೆನ್ ಅವರನ್ನು 5 ದಿನಗಳ ಇಡಿ ಕಸ್ಟಡಿಗೆ ನೀಡಿ ರಾಂಚಿಯ ಪಿಎಂಎಲ್ ಕೋರ್ಟ್ ಆದೇಶಿಸಿದೆ.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ವಿಶೇಷ ಪೀಠವು 48 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕನಿಗೆ ಜಾರ್ಖಂಡ್ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಕೇಳಿದೆ. ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೇಮಂತ್ ಸೊರೆನ್ ಅವರ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಮತ್ತು ಹೈಕೋರ್ಟ್ ಗೆ ಹೋಗುವಂತೆ ಹೇಳಿದೆ.