ಅನಾರೋಗ್ಯದಿಂದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ(85) ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ನಿವಾಸಿಯಾಗಿದ್ದ .ಪಿ.ಮೂಡಲಗಿರಿಯಪ್ಪ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದವರು. ನಾಳೆ ಬೆಳಗ್ಗೆ 10 ಗಂಟೆಗೆ ಅವರ ಸ್ವಗೃಹ ಚಿರತಹಳ್ಳಿ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.