alex Certify BREAKING : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನ ; ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನ ; ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ.!

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ.ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, : ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸುತ್ತದೆ.

ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ ಎಂದು ಆದೇಶ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...