alex Certify BREAKING : ಜಮ್ಮು-ಕಾಶ್ಮೀರದಲ್ಲಿ ದೋಣಿ ಮುಳುಗಿ ನಾಲ್ವರು ಸಾವು, ಹಲವರು ನಾಪತ್ತೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮು-ಕಾಶ್ಮೀರದಲ್ಲಿ ದೋಣಿ ಮುಳುಗಿ ನಾಲ್ವರು ಸಾವು, ಹಲವರು ನಾಪತ್ತೆ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ದೋಣಿ ಮಗುಚಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಾಗೂ ಘಟನೆಯಲ್ಲಿ ಹಲವರು ಕಾಣೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ದೋಣಿ ಮಗುಚಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮುಜಾಫರ್ ಝರ್ಗರ್ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಶಾಲಾ ಮಕ್ಕಳು ಸೇರಿ ಹಲವಾರು ಮಂದಿ ದೋಣಿಯಲ್ಲಿದ್ದರು. ಎಸ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಯ ಹರಿವು ತುಂಬಾ ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ.

ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳು ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಯ ಹರಿವು ತುಂಬಾ ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...