![](https://kannadadunia.com/wp-content/uploads/2022/09/arrest-1663675557.jpg)
ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಪೊಲೀಸರು ನಾಲ್ವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದ ಸುತ್ತಮುತ್ತ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಗಂಗೊಂಡನಹಳ್ಳಿ ಅನಿಲ್ (21), ಅಂದ್ರಹಳ್ಳಿ ಕಾರ್ತಿಕ್ (18), ನವೀನ್ (20) ಮತ್ತು ದೊಂಬರಹಳ್ಳಿ ಮಂಜುನಾಥ್ (19) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 2 ಕೆಜಿ ಗಾಂಜಾ, 2 ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಪೊಲೀಸರು ಈ ಪ್ರದೇಶದ ಮನೆಯ ಮೇಲೆ ದಾಳಿ ನಡೆಸಿ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.