alex Certify BREAKING : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಗೆ ಹಿಂಬದಿಯಿಂದ ಮಾರುತಿ ಶಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತಪಟ್ಟವರನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.

ಮೃತರು ಮಾರುತಿ ಶಿಫ್ಟ್ ಕಾರಿನ ಮೂಲಕ ಹಾಸನ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಬೆಳ್ಳೂರು ಕ್ರಾಸ್ ಬಳಿ ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...