alex Certify BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ ಗೇಟ್ ಬಳಿಕ ಈ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಸರ್ವೀಸ್ ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ವಿಜಯಪುರ ಶಿವಾನಂದ ಚೌಧರಿ(25), ಪ್ರವೀಣ್ ಪಾಟೀಲ್(30), ಸುನೀಲ್(26), ಈರಣ್ಣ(26) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...