
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾರು ಕೆರೆಗೆ ಉರುಳಿ ಬಿದ್ದು ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ನಗರದ ಬೈಪಾಸ್ ಬಳಿ ಬೈರಸಾಗರ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದ ವೇಳೆ ಕಾರು ಕೆರೆಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಪವನ್ (22), ಆರ್ಯನ್ (22), ವಸಂತ್ (21), ಹಾಗೂ ಟ್ಯಾಗೂರ್ (21) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.