ಕಾರ್ಕಳದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಜಾಮೀನು ನೀಡಲಾಗಿದೆ.
ಉಡುಪಿಯ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಪ್ರಮುಖ ಆರೋಪಿ ಅಲ್ತಾಫ್ ಗೆ ಜಾಮೀನು ನೀಡಿದೆ. ಯುವತಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ ರೇಪ್ ನಡೆಸಿದ ಘಟನೆ ಆ.21 ರಂದು ನಡೆದಿತ್ತು.
ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಆರೋಪಿಗಳು ಯುವತಿಯೋರ್ವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದರು. ಕಾರ್ಕಳದ ಅಯ್ಯಪ್ಪನಗರದ ಬಳಿಯ ಹಾಡಿಯಲ್ಲಿ ಕುಕ್ಕಂದೂರು ಗ್ರಾಮದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು, ಪ್ರಮುಖ ಆರೋಪಿ ಅಲ್ತಾಫ್ ಸೇರಿ ಮೂವರನ್ನು ಬಂಧಿಸಲಾಗಿತ್ತು.