ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಗಣಿಧಣಿ ಜನಾರ್ದನ ರೆಡ್ಡಿ ಪಕ್ಷ ವಿಲಿನಕ್ಕೆ ಜನಾರ್ಧನ ರೆಡ್ಡಿ ಆಸಕ್ತಿ ತೋರಿದ್ದರು. ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದು, ಈ ಮೂಲಕ ಜನಾರ್ಧನ್ ರೆಡ್ಡಿ ಅವರು ತಮ್ಮ ಕರ್ನಾಟಕ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಿದ್ದಾರೆ.