alex Certify BREAKING : ರಾಜ್ಯ ಸರ್ಕಾರದಿಂದ ʻಕ್ರಿಶ್ಚಿಯನ್, ಜೈನʼ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದಿಂದ ʻಕ್ರಿಶ್ಚಿಯನ್, ಜೈನʼ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.

ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿ100 ಕೋಟಿ , ಜೈನ ಸಮುದಾಯದ ಅಭಿವೃದ್ಧಿಗೆ50 ಕೋಟಿ ರೂ. ವಕ್ಫ್‌ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ. ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುತ್ತಿದ್ದು, ಇದಕ್ಕಾಗಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಇದಲ್ಲದೆ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ರಕ್ಷಿಸಲು ಮತ್ತು ಸಂಗ್ರಹಿಸಲು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ  ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಜಿ ದೇವದಾಸಿಯರ ಮಾಸಾಶನ 1,500 ರೂ.ನಿಂದ 2000 ರೂ. ಹೆಚ್ಚಳ ಮಾಡಲಾಗುವುದು. 1,500 ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ಉತ್ತೇಜನ, ಮಹಿಳಾ ಸ್ವಸಹಾಯ ಗುಂಪುಗಳಿಗೆ 10 ಕೋಟಿ ರೂ. ಅನುದಾನ  ನೀಡಲಾಗುವುದು ಎಂದು ಹೇಳಿದ್ದಾರೆ. ವಕ್ಫ್‌ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ. ಮೀಸಲು, 100 ಮೌಲಾನಾ  ಅಜಾದ್‌ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುವುದು, ಅಂಗನವಾಡಿ  ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚ್ಯುವಿಟಿ ಸೌಲಭ್ಯ ನೀಡಲಾಗುವುದು, ಅಂಗವಾಡಿ ಕಟ್ಟಡಬಳ ಅಭಿವೃದ್ಧಿಗೆ 300 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...