alex Certify BREAKING : ‘KAS’ ಪರೀಕ್ಷೆ ಬರೆಯುವವರಿಗೆ ಗುಡ್ ನ್ಯೂಸ್ : ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘KAS’ ಪರೀಕ್ಷೆ ಬರೆಯುವವರಿಗೆ ಗುಡ್ ನ್ಯೂಸ್ : ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕೆಎಎಸ್ ಪರೀಕ್ಷೆ ಬರೆಯುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023-24 ನೇ ಸಾಲಿನಲ್ಲಿ ಕೆಎಎಸ್ ಪರೀಕ್ಷೆ ಬರೆಯುವವರಿಗೆ ಒಂದು ಬಾರಿಗೆ ಸೀಮಿತವಾಗಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ಆದೇಶ ಹೇಳಿದೆ..ಕರ್ನಾಟಕ ಲೋಕಸೇವಾ ಆಯೋಗವು ಹೊಸದಾಗಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಎಲ್ಲ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಿಸಿದೆ.ಈ ಮೂಲಕ 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಸ್ಥಾನಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸೌಲಭ್ಯ ಸಿಗಲಿದೆ.

ಸರ್ಕಾರದ ಆದೇಶ ದಿನಾಂಕ 24/01/2024ರಂತೆ ಕರ್ನಾಟಕ ಗೆಜೆಟೆಡ್ ಪ್ರೋಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ) ನಿಯಮಗಳು, 1997 ರನ್ವಯ 2023-24ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ರಿಕ್ತ ಸ್ಥಾನಗಳಿಗೆ ಹೊಸದಾಗಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲಾ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಿಸಿ ಸರ್ಕಾರವು ಆದೇಶಿಸಿದೆ.

2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಧಿಸೂಚಿಸಲ್ಪಡುವ ಗ್ರೂಪ್-ಎ ಮತ್ತು ಗ್ರೂಪ್-ಬಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಗೆ ಮಾತ್ರ ಅನ್ವಯವಾಗುವಂತೆ, ನಿಯಮಗಳನ್ವಯ ಅರ್ಹವಿರುವ ಎಲ್ಲ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲು ತೀರ್ಮಾನಿಸಿ ಆದೇಶಿಸಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...