alex Certify BREAKING : ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್ : 1 ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಲು ‘CM ಸಿದ್ದರಾಮಯ್ಯ’ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್ : 1 ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಲು ‘CM ಸಿದ್ದರಾಮಯ್ಯ’ ಸೂಚನೆ

ಬೆಂಗಳೂರು : ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, 1 ಸಾವಿರ ಕೋಟಿ ಕ್ರಿಯಾ ಯೋಜನೆ ಸಿದ್ದಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಹಿಂದೆ ಹುಬ್ಬಳ್ಳಿ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ‘ ಅಲ್ಪಸಂಖ್ಯಾತರ ಅಭಿವೃದ್ದಿಗೆ 10 ಸಾವಿರ ಕೋಟಿ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದರು. ಸಿದ್ದರಾಮಯ್ಯರ ಹೇಳಿಕೆಗೆ ವಿಪಕ್ಷಗಳು ತೀವ್ರವಾಗಿ ಕಿಡಿಕಾರಿದ್ದವು.  ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿದ್ದವು. ಈ ಬೆನ್ನಲ್ಲೇ 1 ಸಾವಿರ ಕೋಟಿ ಕ್ರಿಯಾ ಯೋಜನೆ ಸಿದ್ದಪಡಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯಹಲವು ಮಹತ್ವದ   ಸೂಚನೆ ನೀಡಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...