alex Certify BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಹಳೆ ಪಿಂಚಣಿ’ ಯೋಜನೆ (OPS) ಜಾರಿಗೆ ಸಮಿತಿ ಪುನರ್ ರಚಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಹಳೆ ಪಿಂಚಣಿ’ ಯೋಜನೆ (OPS) ಜಾರಿಗೆ ಸಮಿತಿ ಪುನರ್ ರಚಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎಂಬಂತೆ ‘ಹಳೆ ಪಿಂಚಣಿ’ ಯೋಜನೆ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಕರ್ನಾಟಕ ರಾಜ್ಯದಲ್ಲಿ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೂಕ್ತ ಬದಲಾವಣೆ/ಮಾರ್ಪಾಡು ಮಾಡಲು ಪರಿಶೀಲಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (3) ರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಹಳೆಯ ಪಿಂಚಣಿ ಯೋಜನೆ (Defined Pension Scheme) ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತುಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಲಾಗಿದೆ.
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ವರದಿಯನ್ನು ಸಲ್ಲಿಸಲು ಅನುವಾಗುವಂತೆ ಸಮಿತಿಯನ್ನು ಪುನರ್ ರಚಿಸುವುದು ಅಗತ್ಯವೆಂದು ಸರ್ಕಾರವು ಮನಗಂಡಿರುತ್ತದೆ. ಅದರಂತೆ ಈ ಕೆಳಕಂಡ ಆದೇಶ ಹೊರಡಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 11.12.2018ರ ಮತ್ತು ದಿನಾಂಕ: 01.03.2023 ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ಈ ಕೆಳಕಂಡಂತೆ ಪುನರ್ ರಚಿಸಿ ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...