alex Certify BREAKING : ರಾಜ್ಯದ ‘ಗೃಹ ರಕ್ಷಕ’ ದಳದ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸರ್ಕಾರದಿಂದ ‘ಕರ್ತವ್ಯ ಭತ್ಯೆ’ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದ ‘ಗೃಹ ರಕ್ಷಕ’ ದಳದ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಸರ್ಕಾರದಿಂದ ‘ಕರ್ತವ್ಯ ಭತ್ಯೆ’ ಪರಿಷ್ಕರಣೆ

ಬೆಂಗಳೂರು : ‘ಗೃಹ ರಕ್ಷಕ’ ದಳದ ಸಿಬ್ಬಂದಿಗಳಿಗೆ  ರಾಜ್ಯ ಸರ್ಕಾರ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಕರ್ತವ್ಯ ಭತ್ಯೆ ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಈ ಕುರಿತು ಮಂಗಳವಾರ ವಿಧಾನ ಸಭೆ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕಿ ಜೊಲ್ಲೆ ಶಶಿಕಲಾ ಅಣ್ಣಾಸಾಹೇಬ ಅವರ ಪ್ರಶ್ನೆಗೆ ಪರಮೇಶ್ವರ್ ಉತ್ತರಿಸಿ ‘ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ರಾಜ್ಯದಲ್ಲಿ 21,327 ಪುರಷ ಹಾಗೂ 4555 ಮಹಿಳೆ ಸೇರಿ ಒಟ್ಟು 25,882 ಗೃಹರಕ್ಷರು ಕಾರ್ಯ ನಿರ್ವಹಿಸುತ್ತಿದ್ದಾರೆ.ಸರ್ಕಾರ ಆದೇಶದಂತೆ ಪೊಲೀಸ್ ಇಲಾಖೆಯ ಬಂದೋಬಸ್ತ್, ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಠಾಣೆ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ರೂ.750, ಬೇರೆ ಇಲಾಖೆಗಳಲ್ಲಿ ರೂ.600 ಹಾಗೂ ಪಹರೆ ಕೆಲಸಕ್ಕೆ ಬೆಂಗಳೂರು ನಗರದಲ್ಲಿ ರೂ.455 ಹಾಗೂ ಇತರೆ ಸ್ಥಳದಲ್ಲಿ ರೂ.380 ಭತ್ಯೆ ನೀಡಲಾಗುತ್ತಿದೆ. ‘ಗೃಹ ರಕ್ಷಕ’ ರಿಗೆ ರೂ.750 ದಿನಭತ್ಯೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...