ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ (Interim Budget) ಮಂಡಿಸುತಿದ್ದಾರೆ.
ಮಧ್ಯಂತರ ಬಜೆಟ್ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್ ಅವರು, ಮಧ್ಯಮ ವರ್ಗದ ಜನರಿಗೆ ಮಹತ್ವದ ಯೋಜನೆಯ್ನು ಘೋಷಿಸಿದ್ದಾರೆ.
ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಅರ್ಹ ಮಧ್ಯಮ ವರ್ಗದವರಿಗೆ ಸ್ವಂತ ಮನೆಗಳನ್ನು ಖರೀದಿಸಲು ಅಥವಾ ನಿರ್ಮಿಸಲು ತಮ್ಮ ಸರ್ಕಾರ ವಸತಿ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದರು. ‘ಮೇಲ್ಛಾವಣಿ ಸೌರೀಕರಣ’ 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಖಾತ್ರಿಪಡಿಸುತ್ತದೆ ಎಂದು ಅವರು ಘೋಷಿಸಿದರು. ಇದು ಕುಟುಂಬಗಳಿಗೆ ವಾರ್ಷಿಕವಾಗಿ 15,000-18,000 ರೂ.ಗಳನ್ನು ಉಳಿಸಲು ಸಹಾಯ ಮಾಡುತ್ತದೆ.