ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಸಾಲ ಕೊಟ್ಟವರ ರಕ್ಷಣೆ ಕಾಣಿಸುತ್ತಿಲ್ಲ. ಸಾಲ ಪಡೆದವರ ರಕ್ಷಣೆಗೆ ಮಾತ್ರ ಗಮನ ಹರಿಸಲಾಗುತ್ತಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರ ರಕ್ಷಣೆ ಬಗ್ಗೆ ಗಮನ ಹರಿಸಲಾಗುತ್ತಿಲ್ಲ ಎಂದು ಸರ್ಕಾರಕ್ಕೆ ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿದ್ದು, ಈ ಮೂಲಕ ಕಿರುಕುಳ ನೀಡುವ ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಬಿಸಿ ಮುಟ್ಟಿಸಲು ಮುಂದಾಗಿತ್ತು. ಆದರೀಗ ಸರ್ಕಾರದ ಸುಗ್ರೀವಾಜ್ಞೆಗೆ ತಣ್ಣೀರೆರಚಿದ್ದಾರೆ.ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿತ್ತು.