ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ವಿಶೇಷ ಸಂಪುಟ ಸಭೆ ಕರೆದಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದು, ಸಭೆಯಲ್ಲಿ ಏನೇನು ಚರ್ಚೆ ನಡೆಯಲಿದೆ, ಸಿದ್ದರಾಮಯ್ಯರ ಮುಂದಿನ ನಡೆಯೇನು..? ಎಂಬ ವಿಚಾರ ಬಹಳ ಕುತೂಹಲ ಮೂಡಿಸಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.