ಕೊಪ್ಪಳ : ಮೃತ ಪಿಎಸ್ ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳದಲ್ಲಿರುವ ಪಿಎಸ್ ಐ ಪರಶುರಾಮ್ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವರು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಪರಶುರಾಮ್ ಸಾವಿನ ಬಗ್ಗೆ ಈಗಾಗಲೇ ಎಫ್ಐಆರ್ ದಾಖಲಾಗಿದೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ನಮ್ಮ ಸರ್ಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತದೆ. ಎಂದು ಭರವಸೆ ನೀಡಿದರು. ಮೃತ ಪಿಎಸ್ ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.